ರಾಜ್ಯದಲ್ಲಿ 600ಕ್ಕೂ ಹೆಚ್ಚು ಐಟಿ ಅಧಿಕಾರಿಗಳಿಂದ 30ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ
ಬೆಂಗಳೂರು: ರಾಜ್ಯದಲ್ಲಿ ಇಂದು ಬೆಳ್ಳಂಬೆಳಗ್ಗೆ 600ಕ್ಕೂ ಹೆಚ್ಚು ಐಟಿ ಅಧಿಕಾರಿಗಳು 30ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ.
ಗೋವಾ-ಕರ್ನಾಟಕ ಐಟಿ ಅಧಿಕಾರಿಗಳ ತಂಡದಿಂದ ಉದ್ಯಮಿಗಳ ಮನೆಗಳ ಮೇಲೆ ದಾಳಿ ನಡೆದಿದೆ. ಆದಾಯ ಮರೆಮಾಚಿ ಐಟಿ ರಿಟರ್ನ್ಸ್ ಸಲ್ಲಿಕೆಗಿಂತೆ ಹೆಚ್ಚಿನ ಆದಾಯ ಹೊಂದಿರುವ ಆರೋಪದ ಹಿನ್ನೆಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಸದಾಶಿವನಗರದ ಎಂಬೆಸ್ಸಿ ಆರ್ಕೆಡ್ ಅಪಾರ್ಟ್ಮೆಂಟ್ನ ನರಪತ್ ಸಿಂಗ್ ಚರೋಡಿ ಎಂಬುವರರ ಫ್ಲ್ಯಾಟ್ ನಂಬರ್ 602ರ ಮೇಲೆ ದಾಳಿ ನಡೆದಿದ್ದು, ನಾಲ್ವರು ಅಧಿಕಾರಿಗಳ ತಂಡದಿಂದ ಪರಿಶೀಲನೆ ನಡೆಯುತ್ತಿದೆ.
ಎಂಬೆಸ್ಸಿ ಗ್ರೂಪ್‌ನ ಎಂಡಿ ಜಿತು ವಿರ್ವಾನಿ, ನಿರ್ದೇಶಕ ನರಪತ್ ಸಿಂಗ್ ಚರೋರಿಯಾ ಮನೆಗಳು ಹಾಗೂ ಫ್ಲಾಟ್ ಮೇಲೆ ದಾಳಿ ನಡೆದಿದೆ. ಜೊತೆಗೆ ರಾಜ್ಯಾದ್ಯಂತ ಇರುವ ಎಂಬೆಸ್ಸಿ ಕಚೇರಿಗಳ ಮೇಲೆ ದಾಳಿ ನಡೆದಿದೆ.





