ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಸದಸ್ಯ ನಿಟ್ಟೆ ಶಶಿಧರ ಶೆಟ್ಟಿ ನಿಧನ
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಸದಸ್ಯ ನಿಟ್ಟೆ ಶಶಿಧರ ಶೆಟ್ಟಿ (66) ಅಲ್ಪ ಕಾಲದ ಅಸೌಖ್ಯದಿಂದ ಇಂದಿಲ್ಲಿ ಬೆಳಿಗ್ಗೆ ಮಂಗಳೂರು ಪದವಿನಂಗಡಿ ಅಲ್ಲಿರುವ ಸ್ವಗೃಹದಲ್ಲಿ ನಿಧನರಾದರು.
ಅಖಿಲ ಭಾರತ ತುಳು ಒಕ್ಕೂಟದ ಗೌರವ ಪ್ರಧಾನ ಕಾರ್ಯದರ್ಶಿ, ಬಂಟರ ಮಾತೃಸಂಘದ ಮಾಜಿ ಕಾರ್ಯದರ್ಶಿ, ಲಯನ್ಸ್ ಕ್ಲಬ್ ಇಂಟರ್‌ನ್ಯಾಷನಲ್ ಇದರ ದ.ಕ ಜಿಲ್ಲಾ ಧುರೀಣ, ತುಳು ಕೂಟ ಕುಡ್ಲ ಇದರ ಹಿರಿಯ ಸದಸ್ಯ, ಪದವಿನಂಗಡಿ ಗಣೇಶೋತ್ಸವ ಸಮಿತಿಯ ಮಾಜಿ ಅಧ್ಯಕ್ಷ, ಶಾರದಾ ಕ್ಯಾಟರರ್ಸ್ ಸಂಸ್ಥೆಗಳ ಮಾಲಕ, ಮಂಗಳೂರು ಪದವಿನಂಗಡಿ ನಿವಾಸಿ.
ಶಶಿಧರ್ ಅವರೋರ್ವ ಅನನ್ಯ ತುಳು ಸಂಘಟಕರಾಗಿದ್ದು ಮೃತರು ಪತ್ನಿ, ಇಬ್ಬರು ಸುಪುತ್ರಿಯರನ್ನು ಅಗಲಿದ್ದಾರೆ. ಸುಪುತ್ರಿ ವಿದೇಶದಿಂದ ಆಗಮಿಸಬೇಕಾಗಿರುವುದರಿಂದ ಅಂತ್ಯಕ್ರಿಯೆ ಜೂನ್ 4ರಂದು ಜರಗಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.





