May 14, 2026

ಬಿ.ಸಿ ರೋಡ್: ಟ್ಯಾಂಕರ್ ಹಾಗೂ ಮಾರುತಿ ಕಾರು ನಡುವೆ ಭೀಕರ ಅಪಘಾತ: ಉದ್ಯಮಿ ಗಂಭೀರ

0
image_editor_output_image-2047448437-1654082166003

ಬಂಟ್ವಾಳ: ಬಿ.ಸಿ.ರೋಡು- ಪುಂಜಾಲಕಟ್ಟೆ ಹೆದ್ದಾರಿಯ ಬಂಟ್ವಾಳ ಸಮೀಪದ ಚಂಡ್ತಿಮಾರ್ ಬಳಿ ಬುಧವಾರ ಮಧ್ಯಾಹ್ನ ಟ್ಯಾಂಕರ್ ಹಾಗೂ ಮಾರುತಿ ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿ ಕಾರು ಚಾಲಕ ಗಂಭೀರ ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಮಡಂತ್ಯಾರಿನ ಕಾಟರಿಂಗ್ ಉದ್ಯಮಿ ರೋಶನ್ ಸೆರಾವೊ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.

ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿದ್ದು, ಕಾರು ರಸ್ತೆಯ ಪಕ್ಕಕ್ಕೆ ಇಳಿದಿದೆ. ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!