December 15, 2025

ಆಸ್ಪತ್ರೆಯ ಆವರಣದಲ್ಲಿ ಸಾಮೂಹಿಕ ಗುಂಡಿನ ದಾಳಿ: ನಾಲ್ಕು ಮಂದಿ ಸಾವು

0
image_editor_output_image1149221612-1654147098586.jpg

ಓಕ್ಲಹೋಮಾ: ಅಮೆರಿಕದಲ್ಲಿ ಮತ್ತೊಂದು ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಬಂದೂಕು ಹಿಡಿದು ಬಂದ ವ್ಯಕ್ತಿಯೊಬ್ಬ ಆಸ್ಪತ್ರೆಯ ಆವರಣದಲ್ಲಿ ಗುಂಡಿನ ದಾಳಿ ನಡೆಸಿದ್ದು, ನಾಲ್ಕು ಮಂದಿ ಸಾವಿಗೀಡಾಗಿರುವ ಘಟನೆ ಬುಧವಾರ ನಡೆದಿದೆ.

ಓಕ್ಲಹೋಮಾದ ಟಲ್ಸಾದಲ್ಲಿರುವ ಸೇಂಟ್‌ ಫ್ರಾನ್ಸಿಸ್‌ ಆಸ್ಪತ್ರೆಯಲ್ಲಿ ಗುಂಡಿನ ದಾಳಿ ನಡೆದಿದೆ. ದಾಳಿಕೋರ ಸಹ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಆಸ್ಪತ್ರೆ ಕಟ್ಟಡದ ಎರಡನೇ ಮಹಡಿಯಲ್ಲಿ ವ್ಯಕ್ತಿಯೊಬ್ಬ ಬಂದೂಕು ಹಿಡಿದಿರುವ ಬಗ್ಗೆ ಕರೆ ಬಂದಿತ್ತು. ಅಧಿಕಾರಿಗಳು ಸ್ಥಳಕ್ಕೆ ಬರುವಷ್ಟರಲ್ಲಿ ಕೆಲವು ಜನರ ಮೇಲೆ ಗುಂಡಿನ ದಾಳಿ ನಡೆದಿತ್ತು. ದಂಪತಿ ಸ್ಥಳದಲ್ಲೇ ಸಾವಿಗೀಡಾಗಿದ್ದರು ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ. ಹಂತಕನ ಬಳಿ ದೊಡ್ಡ ರೈಫಲ್‌ ಮತ್ತು ಪಿಸ್ತೂಲ್‌ ಇತ್ತು ಎಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!