ಉಪ್ಪಿನಂಗಡಿ: ಹಿಜಾಬ್ ಧರಿಸಿಕೊಂಡು ಬಂದ ಆರು ವಿದ್ಯಾರ್ಥಿನಿಯರು ಸಸ್ಪೆಂಡ್
ಉಪ್ಪಿನಂಗಡಿ: ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಧರಿಸಿಕೊಂಡು ತರಗತಿ ಪ್ರವೇಶಿಸಿ ಉಚ್ಚನ್ಯಾಯಾಲಯದ ತೀರ್ಪನ್ನು ಉಲ್ಲಂಘಿಸಿದ 6 ಮಂದಿ ವಿದ್ಯಾರ್ಥಿನಿಯರನ್ನು ಮುಂದಿನ ಆದೇಶದವರೆಗೆ ಪ್ರಾಂಶುಪಾಲರು ಅಮಾನತುಗೊಳಿಸಿದ್ದಾರೆ.
ಯಾವುದೇ ಕಾರಣಕ್ಕೂ ತರಗತಿಗೆ ಹಿಜಾಬ್ ಧರಿಸಿಕೊಂಡು ಬರಬಾರದೆಂಬ ಸರ್ಕಾರದ ಆದೇಶ ಹಾಗೂ ಹೈಕೋರ್ಟ್ ತೀರ್ಪನ್ನು ಪಾಲಿಸದೆ ಪದೇ ಪದೇ ಆದೇಶ ಉಲ್ಲಂಘಿಸುತ್ತಿದ್ದರು. ಕಾಲೇಜಿನ ಕಲಿಕಾ ವಾತಾವರಣಕ್ಕೆ ವಿರುದ್ಧವಾಗಿ ವರ್ತಿಸಿದ್ದ 6 ಮಂದಿ ವಿದ್ಯಾರ್ಥಿನಿಯರನ್ನು ಕಾಲೇಜು ಉಪನ್ಯಾಸಕರ ಸಭೆಯ ಒಮ್ಮತದ ತೀರ್ಮಾನದಂತೆ ಅಮಾನತು ಮಾಡಲಾಗಿದೆ.




