November 22, 2024

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: 10ನೇ ಆರೋಪಿಯ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

0

ಬೆಂಗಳೂರು: ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಗೆ ಸಂಚು ರೂಪಿಸಲು ಸಹಕರಿಸಿದ ಆರೋಪ ಎದುರಿಸುತ್ತಿರುವ ಪ್ರಕರಣದ ಹತ್ತನೇ ಆರೋಪಿಯ ಜಾಮೀನು ಅರ್ಜಿಯನ್ನು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.

ಜಾಮೀನು ಕೋರಿ ಶಿವಮೊಗ್ಗದ ವಾದಿ ಎ ಹುದಾ ನಗರದ ವಾಸಿಯಾದ 50 ವರ್ಷದ ಜಾಫರ್‌ ಸಾದಿಕ್‌ ಬಿನ್‌ ಅಬ್ದುಲ್ ಸತ್ತಾರ್‌ ಸಲ್ಲಿಸಿದ್ದ ಅರ್ಜಿಯನ್ನು ಎನ್‌ಐಎ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಿ.ಎಂ.ಗಂಗಾಧರ ಅವರು ಮಾನ್ಯ ಮಾಡಲು ನಿರಾಕರಿಸಿದ್ದಾರೆ.

‘ನನ್ನನ್ನು ತಪ್ಪಾಗಿ ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ನಾನು ನಿರಪರಾಧಿ ನನಗೆ ಜಾಮೀನು ನೀಡಬೇಕು’ ಎಂದು ಕೋರಿ ಜಾಫರ್ ಸಾದಿಕ್‌ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಅಕ್ಷೇಪಣೆ ಸಲ್ಲಿಸಿದ್ದ ಎನ್‌ಐಎ ಪರ ವಿಶೇಷ ಪ್ರಾಸಿಕ್ಯೂಟರ್ ಪಿ.ಪ್ರಸನ್ನ ಕುಮಾರ್, ‘ಆರೋಪಿಯ ವಿರುದ್ಧ ಸಾಕಷ್ಟು ಸಾಕ್ಷ್ಯಾಧಾರಗಳು ಇರುವ ಕಾರಣ ಜಾಮೀನು ನೀಡಬಾರದು‘ ಎಂದು ಕೋರಿದ್ದರು.

Leave a Reply

Your email address will not be published. Required fields are marked *

error: Content is protected !!