7.5 ಲಕ್ಷ ರೂ. ಲಂಚಕ್ಕೆ ಬೇಡಿಕೆ: ಎಸಿಬಿ ಬಲೆಗೆ ಬಿದ್ದ ಮಹಾನಗರ ಪಾಲಿಕೆ ಆಯುಕ್ತ
ಕಲಬುರಗಿ: 7.5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಶಂಕರಣ್ಣ ವಣಿಕ್ಯಾಳ್ ಅವರನ್ನು ಎಸಿಬಿ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.
ಕೋವಿಡ್ ಸಂದರ್ಭದಲ್ಲಿ ಕೋವಿಡ್ ಸುರಕ್ಷಾ ಚಕ್ರ ಸಹಾಯವಾಣಿಗಾಗಿ ಕೆಲಸ ಮಾಡಿದ್ದಕ್ಕಾಗಿ ಬರಬೇಕಿದ್ದ ಬಾಕಿ ಬಿಲ್ ಮೊತ್ತ 7.5 ಲಕ್ಷ ರೂಪಾಯಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟು, ಅಧೀನ ಸಿಬ್ಬಂದಿ ಮೂಲಕ ಲಂಚ ಪಡೆಯುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಹಿರಿಯ ಕೆಎಎಸ್ ಅಧಿಕಾರಿಯನ್ನು ಬಂಧಿಸಿದ್ದಾರೆ.




