March 26, 2026

ಪ್ರತಿ ಮಂಗಳವಾರ ತಾಲೂಕು ಕಚೇರಿಗಳಿಗೆ ಜಿಲ್ಲಾಧಿಕಾರಿಯ ಭೇಟಿ ಕಡ್ಡಾಯ: ಕಂದಾಯ ಸಚಿವ ಆರ್. ಅಶೋಕ್

0
image_editor_output_image190257613-1654149954414.jpg

ಉಡುಪಿ: ಸ್ಥಳದಲ್ಲಿಯೇ ಜನರ ಸಮಸ್ಯೆಗೆ ಪರಿಹಾರ ನೀಡಬೇಕು. ಡಿಸಿ ಮತ್ತು ತಾಲ್ಲೂಕು ಕಚೇರಿಗೆ ಜನ ಅಲೆದಾಡಬಾರದು. ಮುಂದಿನ ವಾರದಿಂದ ಜಿಲ್ಲಾಧಿಕಾರಿ ಪ್ರತಿ ಮಂಗಳವಾರ ತಾಲ್ಲೂಕು ಕಚೇರಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಬೇಕು ಎಂದು  ಕಂದಾಯ ಸಚಿವ ಆರ್. ಅಶೋಕ್ ಸೂಚಿಸಿದ್ದಾರೆ.

ತಾಲ್ಲೂಕು ಆಡಳಿತ ಸೌಧ ಉದ್ಘಾಟಿಸಿ ಮಾತನಾಡಿದ ಅವರು, ತಾಲ್ಲೂಕು ಆಡಳಿತ ಸೌಧಕ್ಕೆ ಭೂಮಿಪೂಜೆ ನೆರವೇರಿಸುವ ಹಾಗೂ ಉದ್ಘಾಟಿಸುವ ಭಾಗ್ಯ ದೊರೆತಿದೆ. ಜನರ ಮನೆ ಬಾಗಿಲಿಗೆ ಸರ್ಕಾರವೇ ಹೋಗುತ್ತಿದ್ದು, ಜಿಲ್ಲಾಧಿಕಾರಿಗಳು ಕಚೇರಿ ಬಿಟ್ಟು ಹಳ್ಳಿಗಳಿಗೆ ಹೋಗಬೇಕು. ಸ್ಥಳದಲ್ಲಿಯೇ ಜನರ ಸಮಸ್ಯೆಗೆ ಪರಿಹಾರ ನೀಡಬೇಕು. ಡಿಸಿ ಮತ್ತು ತಾಲ್ಲೂಕು ಕಚೇರಿಗೆ ಜನ ಅಲೆದಾಡಬಾರದು. ಮುಂದಿನ ವಾರದಿಂದ ಜಿಲ್ಲಾಧಿಕಾರಿ ಪ್ರತಿ ವಾರ ತಾಲ್ಲೂಕು ಕಚೇರಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಬೇಕು ಎಂದು ಸೂಚನೆ ನೀಡಿದರು.

Leave a Reply

Your email address will not be published. Required fields are marked *

error: Content is protected !!