ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದ ಹಾರ್ದಿಕ್ ಪಟೇಲ್ ಬಿಜೆಪಿಗೆ ಸೇರ್ಪಡೆ
ಅಹಮದಾಬಾದ್: ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದ ಗುಜರಾತ್ ಪಾಟಿದಾರ್ ಸಮುದಾಯದ ಮುಖಂಡ ಹಾರ್ದಿಕ್ ಪಟೇಲ್ ಗುರುವಾರ ಗಾಂಧಿನಗರದ ಬಿಜೆಪಿ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಚಿಕ್ಕ ಸೈನಿಕನ ರೀತಿ ದೇಶದ ಸೇವೆ ಕೆಲಸದಲ್ಲಿ ತೊಡಗಿಕೊಳ್ಳುವುದಾಗಿ ಹಾರ್ದಿಕ್ ಪಟೇಲ್ ಬಿಜೆಪಿ ಸೇರ್ಪಡೆಗೂ ಮುನ್ನ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದರು.
ಭಾರತೀಯ ಜನತಾ ಪಕ್ಷ ಸೇರ್ಪಡೆ ಮೊದಲು ಹಾರ್ದಿಕ್ ಪಟೇಲ್ ಅಹಮದಾಬಾದ್ ನಲ್ಲಿರುವ ತಮ್ಮ ನಿವಾಸದಲ್ಲಿ ಪೂಜೆ ನೆರವೇರಿಸಿದ್ದರು. ಬಳಿಕ ಗಾಂಧಿನಗರದ ಪಕ್ಷದ ಕಚೇರಿಯಲ್ಲಿ ಬಿಜೆಪಿ ಪಕ್ಷಕ್ಕೆ ಸ್ಥಳೀಯ ಮುಖಂಡರು ಬರಮಾಡಿಕೊಂಡಿದ್ದರು ಎಂದು ವರದಿ ಹೇಳಿದೆ.




