November 22, 2024

ಪೌರತ್ವ ತಿದ್ದುಪಡಿಕಾಯ್ದೆ(ಸಿಎಎ) ಕೇರಳದಲ್ಲಿ ಜಾರಿಗೆ ತರುವುದಿಲ್ಲ: ಸಿಎಂ ಪಿಣರಾಯಿ ವಿಜಯನ್

0

ಕೇರಳ: “ಪೌರತ್ವ ತಿದ್ದುಪಡಿಕಾಯ್ದೆ(ಸಿಎಎ)ಯನ್ನು ಕೇರಳ ಸರ್ಕಾರ ಜಾರಿಗೆ ತರುವುದಿಲ್ಲ” ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ. ಕೇರಳ ಸರ್ಕಾರದ ಮೊದಲ ವಾರ್ಷಿಕೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, “ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬಗ್ಗೆ ಸರ್ಕಾರವು ಸ್ಪಷ್ಟ ನಿಲುವನ್ನು ಹೊಂದಿದೆ. ಅದು ಮುಂದುವರಿಯುತ್ತದೆ” ಎಂದರು.

ನಮ್ಮ ದೇಶವು ಭಾರತದ ಸಂವಿಧಾನದಲ್ಲಿ ಉಲ್ಲೇಖಿಸಿದಂತೆ ಜಾತ್ಯತೀತ ತತ್ವದ ಮೇಲೆ ಕೆಲಸ ಮಾಡುತ್ತಿದೆ. ಇಂದಿನ ದಿನಗಳಲ್ಲಿ ಜಾತ್ಯತೀತತೆಯನ್ನು ನಾಶಮಾಡುವ ಪ್ರಯತ್ನಗಳು ನಡೆಯುತ್ತಿವೆ. ಇದಕ್ಕೆ ಒಂದು ನಿರ್ದಿಷ್ಟ ಗುಂಪಿನ ಜನರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಇತ್ತೀಚಿನ ಘಟನೆಯಲ್ಲಿ ಒಂದು ಗುಂಪು ಜನರು ಧರ್ಮದ ಆಧಾರದ ಮೇಲೆ ಪೌರತ್ವವನ್ನು ನಿರ್ಧರಿಸುತ್ತಿದ್ದಾರೆ. ಈ ಘಟನೆಯ ವಿರುದ್ಧ ಕೇರಳ ಸರ್ಕಾರವು ದೃಢವಾದ ನಿಲುವು ತೆಗೆದುಕೊಂಡಿದೆ” ಎಂದು ಹೇಳಿದರು.

“ಜನರಲ್ಲಿ ಕೋಮು ಉದ್ವಿಗ್ನತೆಯನ್ನು ಉಂಟು ಮಾಡಲು ದೇಶದ ವಿವಿಧ ಭಾಗಗಳಲ್ಲಿ ಹಲವಾರು ಸಮೀಕ್ಷೆಗಳನ್ನು ನಡೆಸಲಾಗುತ್ತಿದೆ. ಆದರೆ ಇಲ್ಲಿ ನಮ್ಮ ಸಮಾಜದ ಅತ್ಯಂತ ಬಡ ಕುಟುಂಬಗಳನ್ನು ಗುರುತಿಸಲು ಸಮೀಕ್ಷೆಯನ್ನು ಪೂರ್ಣಗೊಳಿಸಲಾಗಿದೆ. ಈ ಸಮೀಕ್ಷೆಯ ಭಾಗವಾಗಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ರಾಜ್ಯವು ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರುವುದಿಲ್ಲ ಎಂದು ಪುನರುಚ್ಚರಿಸಿ, ಧರ್ಮದ ಆಧಾರದ ಮೇಲೆ ಪೌರತ್ವವನ್ನು ನಿರ್ಧರಿಸಲಾಗುವುದಿಲ್ಲ ಎಂದು ರಾಜ್ಯ ಸರ್ಕಾರವು ದೃಢವಾದ ನಿಲುವನ್ನು ತೆಗೆದುಕೊಂಡಿದೆ” ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!