March 26, 2026

ಜೆಎನ್‌ಯು ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

0
image_editor_output_image-1314313337-1654319925881.jpg

ನವದೆಹಲಿ: ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ಅರಣ್ಯ ಪ್ರದೇಶದಲ್ಲಿ ಸುಮಾರು 40 ರಿಂದ 45 ವರ್ಷದ ವ್ಯಕ್ತಿಯೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ.

ಶವ ಕೊಳೆತ ಸ್ಥಿತಿಯಲ್ಲಿದ್ದು, ಗುರುತು ಪತ್ತೆಯಾಗಿಲ್ಲ. ದೆಹಲಿ ಪೊಲೀಸರ ಅಪರಾಧ ಮತ್ತು ವಿಧಿವಿಜ್ಞಾನ ತಂಡದವರು ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಕೆಲವು ದಿನಗಳ ಹಿಂದೆ ವ್ಯಕ್ತಿ ಮೃತಪಟ್ಟಿರಬಹುದು ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!