March 26, 2026

ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು: ಹಿಜಾಬ್‌ ಧರಿಸಿ ಬಂದ ವಿದ್ಯಾರ್ಥಿನಿಯ ಅಮಾನತು

0
image_editor_output_image1700860221-1654321569812.jpg

ಉಪ್ಪಿನಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಹಿಜಾಬ್‌ ಧರಿಸಿ ತರಗತಿಗೆ ಆಗಮಿಸಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಅಮಾನತು ಗೊಳಿಸಲಾಗಿದೆ.

ಶುಕ್ರವಾರ ತರಗತಿಯಲ್ಲಿ ಹಿಜಾಬ್‌ ಧಾರಣೆಯನ್ನು ಪ್ರತಿಭಟಿಸಿ ತರಗತಿ ಬಹಿಷ್ಕರಿಸಲಾಗಿತ್ತು. ಈ ಮಧ್ಯೆ ತರಗತಿಯೊಳಗೆ ಹಿಜಾಬ್‌ ಧರಿಸಿದ್ದ ವಿದ್ಯಾರ್ಥಿನಿಯನ್ನು ಪ್ರಾಂಶುಪಾಲರು ವಾರದ ಮಟ್ಟಿಗೆ ಅಮಾನತು ಗೊಳಿಸಿದ್ದಾರೆ. ನ್ಯಾಯಾಲಯದ ತೀರ್ಪು ತರಗತಿ ಯೊಳಗೆ ಮಾತ್ರ ಅನ್ವಯಿಸುತ್ತದೆ ಎಂದು ವಾದಿಸಿ ಕಾಲೇಜು ಕಾರಿಡಾರ್‌ನಲ್ಲಿ ಹಿಜಾಬ್‌ ಧರಿಸುತ್ತಿರುವುದರಿಂದ ಸಮಸ್ಯೆಗಳು ಉಂಟಾಗುತ್ತಿವೆ.

ಈ ಬಗ್ಗೆ ಶುಕ್ರವಾರ ಶಾಸಕರ ಅಧ್ಯಕ್ಷತೆಯಲ್ಲಿ ನಡೆದ ಸಿಡಿಸಿ ಸಭೆಯಲ್ಲಿ ಸ್ಪಷ್ಟ ನಿರ್ಧಾರ ತಳೆಯಲಾಗಿದೆ. ಕಾಲೇಜು ಆವರಣದಲ್ಲಿ ಕಾಲೇಜು ಸಮವಸ್ತ್ರಕ್ಕೆ ಹೊರತಾದ ಬಟ್ಟೆ ತೊಡುವಂತಿಲ್ಲ. ಈ ನಿಯಮವನ್ನು ಉಲ್ಲಂಘಿಸುವ ವಿದ್ಯಾರ್ಥಿಗಳನ್ನು ತತ್‌ಕ್ಷಣ ಅಮಾನತುಗೊಳಿಸಬೇಕು.

ಬಳಿಕ ಮುಚ್ಚಳಿಕೆ ಬರೆಸಿಕೊಂಡು ಕಲಿಕೆಗೆ ಅವಕಾಶ ಕಲ್ಪಿಸಬೇಕು. ಮುಚ್ಚಳಿಕೆಯ ಹೊರತಾಗಿಯೂ ನಿಯಮ ಉಲ್ಲಂಘಿಸುವ ಕೃತ್ಯವೆಸಗಿದರೆ ನಿರ್ದಾಕ್ಷಿಣ್ಯವಾಗಿ ಕಾಲೇಜಿನಿಂದ ಡಿಬಾರ್‌ ಮಾಡಬೇಕೆಂದು ನಿರ್ಣಯ ಕೈಗೊಂಡು ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲರಿಗೆ ನಿರ್ದೇಶನ ನೀಡಲಾಯಿತು.

Leave a Reply

Your email address will not be published. Required fields are marked *

error: Content is protected !!