March 26, 2026

ಆರೆಸ್ಸೆಸ್ ಸಂಸ್ಥಾಪಕ ಹೆಡಗೇವಾರ್ ಸಂಬಂಧಿಸಿದ ಪಠ್ಯವನ್ನು ಕೈಬಿಡುವ ಪ್ರಶ್ನೆಯೇ ಇಲ್ಲ: ಬಸವರಾಜ ಬೊಮ್ಮಾಯಿ

0
Screenshot_2022-06-04-13-11-48-15_680d03679600f7af0b4c700c6b270fe7.jpg

ಚಿತ್ರದುರ್ಗ: ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡಗೇವಾರ್ ಅವರಿಗೆ ಸಂಬಂಧಿಸಿದ ಪಠ್ಯವನ್ನು ಕೈಬಿಡುವುದಿಲ್ಲ. ಅವರ ಪಠ್ಯ ಇದ್ದರೆ ತಪ್ಪೇನು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು.

ಹಿರಿಯೂರು ತಾಲ್ಲೂಕಿನ ದೇವರಕೊಟ್ಟ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಹಿತ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಸಮಿತಿ ಕಾರ್ಯ ಮುಗಿದಿದೆ. ಹೀಗಾಗಿ ಅದನ್ನು ವಿಸರ್ಜನೆ ಮಾಡಲಾಗಿದೆಯೇ ಹೊರತು ರದ್ದು ಮಾಡಿಲ್ಲ. ಹೊಸ ಸಮಿತಿ ರಚನೆಯ ಅವಶ್ಯಕತೆ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

‘ಪಠ್ಯಪುಸ್ತಕ ವಿಚಾರದಲ್ಲಿ ಚರ್ಚೆ ನಡೆದ ಬಳಿಕ ಪರಿಶೀಲಿಸುವುದಾಗಿ ಆರಂಭದಲ್ಲೇ ಹೇಳಿದ್ದೆ. ವಾಸ್ತವಾಂಶದ ಆಧಾರದ ಮೇರೆಗೆ ಕೆಲ ಬದಲಾವಣೆ ಮಾಡಲಾಗುತ್ತಿದೆ. ಮಠಾಧೀಶರ ಒತ್ತಡಕ್ಕೆ ಮಣಿದು ಈ ತೀರ್ಮಾನ ಕೈಗೊಂಡಿಲ್ಲ’ ಎಂದು ಹೇಳಿದರು.

‘ಪಠ್ಯಪುಸ್ತಕವನ್ನು ನಾನೂ ಗಮನಿಸಿರಲಿಲ್ಲ. ಶುಕ್ರವಾರ ಪಠ್ಯಪುಸ್ತಕ ಪರಿಶೀಲನೆ ಮಾಡಿದೆ. ಬರಗೂರು ರಾಮಚಂದ್ರಪ್ಪ ಸಮಿತಿ ರಚಿಸಿದ್ದ ಪಠ್ಯಕ್ಕೂ ಪರಿಷ್ಕೃತ ಪಠ್ಯಕ್ಕೂ ಒಂದು ವಾಕ್ಯ ಮಾತ್ರ ವ್ಯತ್ಯಾಸವಿದೆ. ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ ಅವರು ಪ್ರಶ್ನಿಸಿದ ಲಿಂಗದೀಕ್ಷೆ ಬರಗೂರು ಸಮೀತಿಯ ಪಠ್ಯದಲ್ಲಿಯೇ ಇತ್ತು. ಇದನ್ನು ಮಠಾಧೀಶರಿಗೆ ಮನವರಿಕೆ ಮಾಡಿಕೊಡಲಾಗಿದೆ’ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!