ಖಾಸಗಿ ಸುದ್ದಿವಾಹಿನಿಯ ಸಹ ಸಂಸ್ಥಾಪಕ ಮುಹಮ್ಮದ್ ಜುಬೇರ್ ವಿರುದ್ಧ ಎಫ್‌ಐಆರ್ ದಾಖಲು
ಸೀತಾಪುರ: ಹಿಂದೂ ಧಾರ್ಮಿಕ ಮುಖಂಡರು “ದ್ವೇಷ ಹರಡುವವರು” ಎಂದು ಟ್ವೀಟ್ ಮಾಡಿದ್ದ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ವಿರುದ್ಧ ಉತ್ತರ ಪ್ರದೇಶದ ಖೈರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಹಿಂದೂ ಶೇರ್ ಸೇನೆಯ ಜಿಲ್ಲಾಧ್ಯಕ್ಷ ಭಗವಾನ್ ಶರಣ್ ಅವರು ನೀಡಿದ ದೂರಿನ ಆಧಾರದ ಮೇಲೆ ಬುಧವಾರ ಪ್ರಕರಣ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂಪಿ ಸಿಂಗ್ ಅವರು ಪಿಟಿಐಗೆ ತಿಳಿಸಿದ್ದಾರೆ.




