March 26, 2026

ಪುತ್ತೂರು: ಕಾರ್ತಿಕ್ ಮೇರ್ಲ ಹತ್ಯೆ ಆರೋಪಿ ಚರಣ್ ರಾಜ್ ಕೊಲೆ ಪ್ರಕರಣ: ಮೂವರು ಪೊಲೀಸ್ ವಶಕ್ಕೆ

0
image_editor_output_image-873864425-1654437728890.jpg

ಪುತ್ತೂರು: ಕೆಲ ವರ್ಷಗಳ ಹಿಂದೆ ನಡೆದ ಹಿಂದೂ ಜಾಗರಣ ವೇದಿಕೆ ಮುಖಂಡ ಕಾರ್ತಿಕ್ ಮೇರ್ಲ ರವರ ಹತ್ಯೆಯ ಆರೋಪಿ ಚರಣ್ ರಾಜ್ ರೈ ರನ್ನು ಜೂ.4 ರಂದು ಹತ್ಯೆ ಮಾಡಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಲ್ಲಿ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ತಿಳಿದು ಬಂದಿದೆ.

ಈ ಹಿಂದೆ ನಡೆದ ಕಾರ್ತಿಕ್ ಮೇರ್ಲ ಹತ್ಯೆಗೆ ಪ್ರತೀಕಾರವಾಗಿ ಚರಣ್ ರಾಜ್ ಎಂಬಾತನನ್ನು ಕಲ್ಲಡ್ಕದ ಕಿಶೋರ್‍ ಪೂಜಾರಿ ತಂಡವು ಹತ್ಯೆ ಮಾಡಿತ್ತು ಎನ್ನಲಾಗಿದೆ.

ಕಾರ್ಯಾ ಚರಣೆಯಲ್ಲಿ ದಕ್ಷಿಣ ಕನ್ನಡ ಎಸ್‌.ಪಿ ಸೋನಾವಣೆ ಋಷಿಕೇಷ್‌ ಭಗವಾನ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ್ ಚಂದ್ರ, ಪೊಲೀಸ್ ಉಪಾಧೀಕ್ಷಕರಾದ ಗಾನ ಪಿ ಕುಮಾರ್ ರವರ ಸೂಚನೆಯಂತೆ, ಸುಳ್ಯ ಠಾಣೆಯ ವೃತ್ತ ನಿರೀಕ್ಷಕರಾದ ನವೀನ್ ಚಂದ್ರ ಜೋಗಿ, ಬೆಳ್ಳಾರೆ ಪಿಎಸ್ಐ ರುಕ್ಮ ನಾಯ್ಕ್, ಸಂಪ್ಯ ಪೊಲೀಸ್‌ ಸಬ್ ಇನ್ಸ್ ಪೆಕ್ಟರ್ ಉದಯ ರವಿ ನೇತೃತ್ವದ ತಂಡ ಮೂವರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೆಯ್ಯೂರು ನಿವಾಸಿ ನರ್ಮೇಶ್ ರೈ(29), ನಿತಿಲ್ ಶೆಟ್ಟಿ(23), ವಿಜೇಶ್(22) ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ . ಪ್ರಮುಖ ಆರೋಪಿ ಕಿಶೋರ್‍ ಪೂಜಾರಿ ಎಂಬಾತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ..

Leave a Reply

Your email address will not be published. Required fields are marked *

error: Content is protected !!