February 3, 2026

ಪಡುಗಿರಿಯ ರಸ್ತೆಗೆ ನಾಥೂರಾಮ್ ಗೋಡ್ಸೆ ನಾಮಫಲಕ: ಸ್ಥಳದಲ್ಲಿ ಗೊಂದಲದ ವಾತಾವರಣ

0
image_editor_output_image877505655-1654508732237.jpg

ಉಡುಪಿ: ಕಾರ್ಕಳ ತಾಲ್ಲೂಕಿನ ಬೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಗೊಳಪಡುವ ಪಡುಗಿರಿಯ ರಸ್ತೆಗೆ ನಾಥೂರಾಮ್ ಗೋಡ್ಸೆ ನಾಮಫಲಕ ಹಾಕಲಾಗಿದ್ದು, ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.

ವಿಷಯ ತಿಳಿದ ಕೂಡಲೇ ಯುವ ಕಾಂಗ್ರೆಸ್ ಕಾರ್ಯಕರ್ತರು ಸ್ಥಳಕ್ಕೆ ತೆರಳಿ ನಾಮಫಲಕ ತೆರವಿಗೆ ಒತ್ತಾಯಿಸಿ, ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಕ್ರೋಶ ವ್ಯಕ್ತಪಡಿಸಿದರು. ಬೋಳ ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ಕಾರ್ಕಳ ಪೊಲೀಸರು ನಾಮಫಲಕ ತೆರವುಗೊಳಿಸಿದರು.

Leave a Reply

Your email address will not be published. Required fields are marked *

error: Content is protected !!