June 11, 2026

ಮಂಗಳೂರು: ಯುವಕನ ಮೇಲೆ ಚೂರಿಯಿಂದ ಇರಿದು ಕೊಲೆಗೆ ಯತ್ನ

0
image_editor_output_image1701231291-1654567929925

ಮಂಗಳೂರು: ಯುವಕನೋರ್ವನಿಗೆ ಚೂರಿಯಿಂದ ಇರಿದು ಹತ್ಯೆಗೆ ಯತ್ನಿಸಿರುವ ಘಟನೆ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೈಕಂಪಾಡಿ ಮೀನಾ ಕಾಳಿ ರಸ್ತೆಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ರಾಘವೇಂದ್ರ ಅಲಿಯಾಸ್ ರಾಜ(28) ಇರಿತಕ್ಕೊಳಗಾದ ವ್ಯಕ್ತಿ ಎಂದು ಪೊಲೀಸರು ತಿಳಿಸಿದ್ದಾರೆ.

ದುಷ್ಕರ್ಮಿಗಳು ರಾಘವೇಂದ್ರನಿಗೆ ಚಾಕುವಿನಿಂದ ಇರಿದಿದ್ದು, ಗಂಭೀರ ಗಾಯಗೊಂಡಿರುವ ಆತನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ದುಷ್ಕರ್ಮಿಗಳನ್ನು ರಾಘವೇಂದ್ರನ ಸ್ನೇಹಿತರೆಂದು ಆರೋಪಿಸಲಾಗಿದ್ದು, ಹಲ್ಲೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!