June 11, 2026

ನಗರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷನ ಬರ್ಬರ ಹತ್ಯೆ

0
image_editor_output_image1242157929-1654578720331.jpg

ಕೋಲಾರ/ಮುಳಬಾಗಿಲು: ಮುಳಬಾಗಿಲು ನಗರಸಭೆ ಸದಸ್ಯ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ ಜಗನ್ಮೋಹನ್ ರೆಡ್ಡಿ (45) ಅವರನ್ನು ಗಂಗಮ್ಮನಗುಡಿ ದೇಗುಲದ ಬಾಗಿಲಿನಲ್ಲಿ ಮಂಗಳವಾರ ಬೆಳಿಗ್ಗೆ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಮುತ್ಯಾಲಪೇಟೆಯ ಅವರ ನಿವಾಸದ ಬಳಿ ಇರುವ ದೇಗುಲದ ಬಾಗಿಲು ತೆರೆಯುವಾಗ ಹೊರಗಡೆ ನಿಂತಿದ್ದ ಕೆಲ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಏಕಾಏಕಿ ದಾಳಿ ನಡೆಸಿರುವುದು ಗೊತ್ತಾಗಿದೆ.

ಅವರ ನಿವಾಸದ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಕಲ್ಪಿಸಲಾಗಿದೆ. ಅವರಿಗೆ ಪತ್ನಿ ಹಾಗೂ ಹೆಣ್ಣು ಮಗುವಿದ್ದು, ಸತತ ಎರಡನೇ ಬಾರಿ ಪಕ್ಷೇತರ ಸದಸ್ಯರಾಗಿ ಆಯ್ಕೆಯಾಗಿದ್ದರು. ಮಾಜಿ ಶಾಸಕ ಕೊತ್ತೂರು ಮಂಜುನಾಥ್‌ ಅವರ ಬಣದಲ್ಲಿ ಗುರುತಿಸಿಕೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!