ಭ್ರಷ್ಟಾಚಾರ ಆರೋಪ: ಕಾಂಗ್ರೆಸ್ ನಾಯಕ ಸಾಧು ಸಿಂಗ್ ಬಂಧನ
ಚಂಡೀಗಡ: ಪಂಜಾಬ್ ವಿಚಕ್ಷಣ ದಳ (ವಿ.ಬಿ) ಮಾಜಿ ಸಚಿವ, ಕಾಂಗ್ರೆಸ್ ನಾಯಕ ಸಾಧು ಸಿಂಗ್ ಧರಮ್ಸೋಟ್ ಅವರನ್ನು ಮಂಗಳವಾರ ಮುಂಜಾನೆ ಬಂಧಿಸಿದೆ.
ಸಾಧು ಸಿಂಗ್ ಅವರು ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಸಂಪುಟದಲ್ಲಿ ಅರಣ್ಯ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದರು. ಇವರ ಸಹಚರರಾದ ಸ್ಥಳೀಯ ಪತ್ರಕರ್ತ ಕಮಲ್ಜಿತ್ ಸಿಂಗ್ ಅವರನ್ನೂ ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಮಾಹಿತಿ ಖಚಿತಪಡಿಸಿರುವ ವಿ.ಬಿ ಅಧಿಕಾರಿ, ‘ಇಬ್ಬರನ್ನು ಭ್ರಷ್ಟಾಚಾರದ ಆರೋಪದಡಿಯಲ್ಲಿ ಬಂಧಿಸಲಾಗಿದೆ’ ಎಂದು ಹೇಳಿದರು.
ಮರ ಕಡಿಯುವುದಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಸಾಧು ಸಿಂಗ್ ವಿರುದ್ಧ ಕ್ರಮ ಕೈಗೊಳ್ಳವುದಾಗಿ ಮುಖ್ಯಮಂತ್ರಿ ಭಗವಂತ್ ಮಾನ್ ಇತ್ತೀಚೆಗಷ್ಟೇ ಹೇಳಿದ್ದರು.




