February 4, 2026

ಕಾರು, ಟ್ರಕ್ ಮಧ್ಯೆ ಢಿಕ್ಕಿ: ಕಾರಿನಲ್ಲಿದ್ದ ಒಂದೇ ಕುಟುಂಬದ 8 ಮಂದಿ ದಾರುಣ ಸಾವು

0
image_editor_output_image658363273-1654579535245.jpg

ರಾಜಸ್ಥಾನ: ಎಸ್ಯುವಿ ಕಾರು ಮತ್ತು ಟ್ರಕ್ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ 8 ಜನರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಬಾಢ್ಮೇರ್ ಜಿಲ್ಲೆಯ ಗುಡಮಲಾನಿ ಮೆಗಾ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ಜಲೋರ್ ಜಿಲ್ಲೆಯ ಸಂಚೋರ್‌ನಲ್ಲಿ ನೆಲೆಸಿರುವ ಒಂದೇ ಕುಟುಂಬದವರು ನಿನ್ನೆ ರಾತ್ರಿ ಎಸ್‌ಯುವಿ ಕಾರಿನಲ್ಲಿ ಗುಡಮಲಾನಿಯಲ್ಲಿ ನಡೆಯುತ್ತಿದ್ದ ಮದುವೆಗೆ ತೆರಳಿದ್ದರು. ಈ ವೇಳೆ ಮಾರ್ಗಮಧ್ಯೆ ಎಸ್ಯುವಿ ಕಾರು ಟ್ರಕ್ಗೆ ಡಿಕ್ಕಿ ಹೊಡೆದಿದೆ.

ದುರ್ಘಟನೆಯಲ್ಲಿ 6 ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡ 4 ಮಂದಿಯನ್ನು ಗುಡಮಲಾನಿ ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು. ಚಿಕಿತ್ಸೆ ವೇಳೆ ಇಬ್ಬರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಇದೀಗ ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಸಂಚೋರ್‌ಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಘಟನೆ ಕುರಿತು ಮಾಹಿತಿ ಪಡೆದ ಗುಡಮಲಾನಿ ಪೊಲೀಸರು ಮತ್ತು ಆಡಳಿತಾಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!