February 4, 2026

ಎಂಟನೇ ತರಗತಿ ವಿದ್ಯಾರ್ಥಿನಿ ಕುಸಿದು ಬಿದ್ದು ಮೃತ್ಯು

0
Screenshot_20220607-105930_YouTube.jpg

ಕಣ್ಣೂರು: ಪಾನೂರು ಕಣ್ಣಂಕೋಟ್ ಎಂಟನೇ ತರಗತಿ ವಿದ್ಯಾರ್ಥಿನಿ ಕುಸಿದು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.

ಕಣ್ಣೂರು ಬೂದಕಾಡ್ ನಿವಾಸಿ ಅಬ್ದುಲ್ ರಸಾಖ್ ಮತ್ತು ಅಫ್ಸಾ ಅವರ ಮಗಳು ಫರ್ಮಿ ಫಾತಿಮ ಮೃತಪಟ್ಟ ವಿದ್ಯಾರ್ಥಿನಿ. ಈಕೆ ಮೊಕೇರಿ ರಾಜೀವ್ ಗಾಂಧಿ ಹೈರ್ ಸೆಕೆಂಡರಿ ಸ್ಕೂಲ್ ವಿದ್ಯಾರ್ಥಿನಿ.

ನಿನ್ನೆ ಶಾಲೆಯಿಂದ ಮನೆಗೆ ಬಂದ ವಿದ್ಯಾರ್ಥಿನಿ ಕುಸಿದು ಬಿದ್ದಿದ್ದು, ತಕ್ಷಣ ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಇಂದು ಬೆಳಿಗ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಮರಣಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ.

Leave a Reply

Your email address will not be published. Required fields are marked *

error: Content is protected !!