ಸಾಮೂಹಿಕ ಅತ್ಯಾಚಾರದ ವೀಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್: ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲು
ಹೈದರಾಬಾದ್: ಜುಬಿಲಿ ಹಿಲ್ಸ್‌ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರದ ಚಿತ್ರಗಳು ಮತ್ತು ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡ ಆರೋಪದ ಮೇಲೆ ತೆಲಂಗಾಣದ ದುಬ್ಬಾಕ ಕ್ಷೇತ್ರದ ಬಿಜೆಪಿ ಶಾಸಕ ಎಂ. ರಘುನಂದನ್ ರಾವ್ ವಿರುದ್ಧ ಹೈದರಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ವಕೀಲರೊಬ್ಬರ ದೂರಿನ ಮೇರೆಗೆ ರಾವ್ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 228 ಎ ಅಡಿಯಲ್ಲಿ ಅಬಿಡ್ ರೋಡ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸೋಮವಾರ ತಡರಾತ್ರಿ ಪ್ರಕರಣ ದಾಖಲಾಗಿದ್ದು, ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸುವವರಿಗೆ ಐಪಿಸಿ ಸೆಕ್ಷನ್ 228ಎ ಅಡಿಯಲ್ಲಿ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ.




