February 4, 2026

ಈದ್ಗಾ ಮೈದಾನವನ್ನು ಯಾವುದೇ ಸಮುದಾಯ ಬಳಕೆ ಮಾಡಬಹುದು: ಬಿಬಿಎಂಪಿ

0
image_editor_output_image-713737246-1654588383168.jpg

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನ ಪಾಲಿಕೆಯ ಸ್ವತ್ತಾಗಿದ್ದು, ಯಾವುದೇ ಸಮುದಾಯ ಈ ಮೈದಾನವನ್ನು ಬಳಕೆ ಮಾಡಬಹುದು ಎಂದು ಬಿಬಿಎಂಪಿ ಸೋಮವಾರ ಸ್ಪಷ್ಟಪಡಿಸಿದೆ.

ಚಾಮರಾಜಪೇಟೆಯಲ್ಲಿ ಈದ್ಗಾ ಮೈದಾನ ಎಂದು ಕರೆಯಲ್ಪಡುವ ಮೈದಾನದ ಮಾಲೀಕತ್ವದ ಸ್ಥಿತಿಗೆ ಸಂಬಂಧಿಸಿದಂತೆ ಕೆಲವು ಹಿಂದೂ ಸಂಘಟನೆಗಳು ಬಿಬಿಎಂಪಿಯಿಂದ ಸ್ಪಷ್ಟೀಕರಣವನ್ನು ಕೇಳಿದ್ದವು. ಹಿಂದೂ ಜನಜಾಗೃತಿ ಸಮಿತಿ ಮತ್ತು ಸನಾತನ ಸಂಸ್ಥೆಯಂತಹ ಸಂಘಟನೆಗಳು ಆಟದ ಮೈದಾನ ಬಿಬಿಎಂಪಿಗೆ ಸೇರಿರುವುದರಿಂದ ತಮಗೂ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿದ್ದವು.

ಈ  ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಬಿಬಿಎಂಪಿ ವಿಶೇಷ ಆಯುಕ್ತ ಡಾ.ಹರೀಶ್ ಕುಮಾರ್ ಅವರು, ಮೈದಾನವು ಬಿಬಿಎಂಪಿ ಆಸ್ತಿಯಾಗಿದ್ದು, ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತರು ಪಾಲಕರಾಗಿದ್ದಾರೆ. ಆಟದ ಮೈದಾನದಲ್ಲಿ ವರ್ಷಕ್ಕೆ ಎರಡು ಬಾರಿ ಪ್ರಾರ್ಥನೆಗೆ ಅವಕಾಶ ನೀಡಬಹುದು ಎಂದು ನ್ಯಾಯಾಲಯದ ಆದೇಶವಿದೆ ಎಂದು ಹೇಳಿದ್ದಾರೆ

Leave a Reply

Your email address will not be published. Required fields are marked *

error: Content is protected !!