ಚಿಕ್ಕಮಗಳೂರು: ಡ್ರಾಪ್ ಕೊಡುವ ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಆರೋಪಿ ಬಂಧನ
ಚಿಕ್ಕಮಗಳೂರು: ಡ್ರಾಪ್ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಮೂಡಿಗೆರೆ ತಾಲೂಕಿನ ಗೋಣಿ ಬೀಡು ಗ್ರಾಮದಲ್ಲಿ ನಡೆದಿದೆ.
ಆರೋಪಿಯನ್ನು ದೇವರಾಜ್ ಎಂದು ತಿಳಿದು ಬಂದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ವಿದ್ಯಾರ್ಥಿನಿ ಕಾಲೇಜಿನಿಂದ ಮನೆಗೆ ತೆರಳುತ್ತಿರುವ ವೇಳೆ ದೇವರಾಜ್ ತಾನು ಡ್ರಾಪ್ ನೀಡುತ್ತೇನೆ ಎಂದು ಸ್ಕೂಟಿಯಲ್ಲಿ ಕೂರಿಸಿಕೊಂಡು ಹೋಗಿದ್ದಾನೆ. ಬಳಿಕ ರಸ್ತೆ ಮಧ್ಯೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಪ್ರಕರಣ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.




