ಮೆಟ್ರೊ ಪಾರ್ಕಿಂಗ್ ಪ್ರದೇಶದಲ್ಲಿ ಅಗ್ನಿ ಅವಘಡ:
90 ವಾಹನಗಳಿಗೆ ಹಾನಿ
ನವದೆಹಲಿ: ಆಗ್ನೇಯ ದೆಹಲಿಯ ಜಾಮಿಯಾ ನಗರದ ಮೆಟ್ರೊ ಪಾರ್ಕಿಂಗ್ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 90 ವಾಹನಗಳಿಗೆ ಹಾನಿಯಾಗಿವೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಜಾಮಿಯ ನಗರದ ಟಿಕೋನಾ ಪಾರ್ಕ್‌ನಲ್ಲಿ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಮುಂಜಾನೆ 5 ಗಂಟೆ ಸುಮಾರಿಗೆ ಕರೆ ಬಂದಿದೆ. 11 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿಯನ್ನು ಹತೋಟಿಗೆ ತರಲಾಗಿದೆ ಎಂದು ದೆಹಲಿಯ ಅಗ್ನಿ ಶಾಮಕ ಸೇವೆಗಳ ನಿರ್ದೇಶಕ ಅತುಲ್ ಗಾರ್ಗ್ ತಿಳಿಸಿದ್ದಾರೆ.




