February 2, 2026

ಬೆಂಗಳೂರಿನಿಂದ ಮಂಗಳೂರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವತಿಗೆ ಲೈಂಗಿಕ ಕಿರುಕುಳ:
ಬಿ.ಸಿ.ರೋಡ್ ನ ಯುವಕನ‌ ಬಂಧನ

0
image_editor_output_image-1719005821-1654678104041.jpg

ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಸೋಮವಾರ ರಾತ್ರಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಬಿ.ಸಿ ರೋಡ್ ನ ನಿವಾಸಿ ಮಹಮ್ಮದ್ ಮುಸ್ತಾಫಾ (24) ಬಂಧಿತ ಆರೋಪಿ.

ಯುವತಿ ಸೋಮವಾರ ರಾತ್ರಿ ಬೆಂಗಳೂರಿನಿಂದ ಮಂಗಳೂರು ಕಡೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ವೇಳೆ ಮುಸ್ತಾಫಾ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ವೇಳೆ ಯುವತಿಗೆ ಹಾಗೂ ಸಹ ಪ್ರಯಾಣಿಕರಿಗೆ ಜೀವ ಬೆದರಿಕೆ ಹಾಕಿದ್ದ.

ಈ ಕುರಿತು ಯುವತಿ ಕಂಕನಾಡಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!