September 20, 2024

ಬಂಟ್ವಾಳ: ಕಾರಿಂಜೇಶ್ವರ ದೇವಸ್ಥಾನದಲ್ಲಿ ವಿಕೃತಿ ಮೆರೆದ ಪ್ರಕರಣ:
ನಾಲ್ವರು ಆರೋಪಿಗಳ ಬಂಧನ

0

ಬಂಟ್ವಾಳ: ಕಾರಿಂಜ ಮಹತೊಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಒಳಗೆ ಅಕ್ರಮ ಪ್ರವೇಶ ಮಾಡಿ ಚಪ್ಪಲಿ ಹಾಕಿಕೊಂಡು ಹೋಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಪುಂಜಾಲಕಟ್ಟೆ ಎಸ್.ಐ.ಸೌಮ್ಯ ನೇತ್ರತ್ವದ ಪೋಲೀಸ್ ತಂಡ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದೆ.

ಕಾಸರಗೋಡು ಹಾಗೂ ಉಳ್ಳಾಲ ಮೂಲದ ನಾಲ್ವರು ಆರೋಪಿ ಗಳನ್ನು ವಶಕ್ಕೆ ಪಡೆದುಕೊಂಡು ಈ ಘಟನೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕಿಡಿಗೇಡಿಗಳು ಅಕ್ರಮವಾಗಿ ದೇವಳದ ಒಳಗೆ ಚಪ್ಪಲಿ ಹಾಕಿ ಪ್ರವೇಶ ಮಾಡಿ ಹಿಂಧೂಗಳ ಭಾವನೆಗಳಿಗೆ ದಕ್ಕೆ ತಂದಿದ್ದು. ಅಲ್ಲದೆ ಅದನ್ನು ದೇವಸ್ಥಾನದಲ್ಲಿ ಚಪ್ಪಲಿ ಹಾಕಿ ನಡೆದಾಡುವ ವಿಡಿಯೋ ವನ್ನು ಸಾಮಾಜಿಕ ಜಾಲತಾಣ ದಲ್ಲಿ ಹಾಕಿ ವಿಜ್ರಂಭಿಸಿ ಹಿಂಧುಗಳ ಧಾರ್ಮಿಕ ನಂಬಿಕೆಗೂ ಧಕೆ ತಂದಿದ್ದು, ಇದನ್ನು ದೇವಸ್ಥಾನದ ಆಡಳಿತ ಮಂಡಳಿ ತೀವ್ರವಾಗಿ ಖಂಡಿಸಿದ್ದು ಆರೊಪಿಗಳನ್ನು ಶೀಘ್ರ ಬಂಧಿಸಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕಾಗಿ ಪುಂಜಾಲಕಟ್ಟೆ ಠಾಣೆಗೆ ಮನವಿ ನೀಡಿತ್ತು.

ಘಟನೆ ಗೆ ಸಂಬಂಧಿಸಿದಂತೆ ಕಾರ್ಯಚರಣೆ ನಡೆಸಿದ ಪುಂಜಾಲಕಟ್ಟೆ ಪೋಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಇನ್ನುಳಿದಂತೆ ಇಬ್ಬರು ಆರೋಪಿಗಳು ಈ ಘಟನೆಯಲ್ಲಿ ಇದ್ದ ಬಗ್ಗೆ ವಿಡಿಯೋ ದಲ್ಲಿ ಸೆರೆಯಾಗಿದ್ದು ಅವರ ಬಂಧನಕ್ಕಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!