July 6, 2026

ಕಾನ್ಪುರ ಗಲಭೆ ಪ್ರಕರಣ: ಮೂವರು ಪಿಎಫ್‌ಐ ಕಾರ್ಯಕರ್ತರ ಬಂಧನ

0
image_editor_output_image252398076-1654751888478.jpg

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯ ಮೂವರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಪ್ರವಾದಿ ಮಹಮ್ಮದ್ ವಿರುದ್ಧದ ಅವಹೇಳನಕಾರಿ ಹೇಳಿಕೆಯನ್ನು ಪ್ರತಿಭಟಿಸಿ ಕಾನ್ಪುರದಲ್ಲಿ ಗಲಭೆ ನಡೆಸಲಾಗಿತ್ತು. ಇದರೊಂದಿಗೆ, ಕಾನ್ಪುರ ಗಲಭೆಯಲ್ಲಿ ಬಂಧನಕ್ಕೊಳಗಾದವರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಂಧಿತ ಪಿಎಫ್‌ಐ ಕಾರ್ಯಕರ್ತರನ್ನು ಸೈಫುಲ್ಲಾ, ಮೊಹಮ್ಮದ್ ನಸೀಮ್ ಮತ್ತು ಮೊಹಮ್ಮದ್ ಉಮರ್ ಎಂದು ಗುರುತಿಸಲಾಗಿದೆ. ಈ ಮೂವರು 2019ರಲ್ಲಿ ಸಿಎಎ ವಿರುದ್ಧ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾಗಿ ಮತ್ತೆ ಬಿಡುಗಡೆಯಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!