ವಿಟ್ಲ: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು
ವಿಟ್ಲ: ಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟದ್ದಾರೆ ಎಂದು ತಿಳಿದು ಬಂದಿದೆ.
ಮೃತರನ್ನು ದಾಸರಬೆಟ್ಟು ನಿವಾಸಿ ನಾಸಿರ್ ಎಂದು ಗುರುತಿಸಲಾಗಿದೆ.
ನಾಸಿರ್ ರವರು ಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.




