March 26, 2026

ಧಾರವಾಡ ವಿ.ವಿ ಕೃಷಿ ಕೀಟ ಶಾಸ್ತ್ರ ವಿಭಾಗದ ವಿದ್ಯಾರ್ಥಿನಿ, ವಿಟ್ಲ ಮೂಲದ ನಿವಾಸಿ ಅಪೂರ್ವ ಲಕ್ಷ್ಮಿಗೆ ಚಿನ್ನದ ಪದಕ

0
IMG-20220609-WA0040.jpg

ಕನ್ಯಾನ: ಧಾರವಾಡ ವಿಶ್ವವಿದ್ಯಾನಿಲಯದ ಕೃಷಿ ಕೀಟ ಶಾಸ್ತ್ರ ವಿಭಾಗದ ವಿಧ್ಯಾರ್ಥಿನಿ ಕುಮಾರಿ ಅಪೂರ್ವ ಲಕ್ಷ್ಮಿ ಚಿನ್ನದ ಪದಕ ಪಡೆದಿದ್ದಾರೆ.

ಧಾರವಾಡ ಕರ್ನಾಟಕ ವಿಶ್ವವಿದ್ಯಾನಿಲಯದ 35ನೇ ಘಟಿಕೋತ್ಸವದಲ್ಲಿ ಇವರಿಗೆ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಚಿನ್ನದ ಪದಕ ಪ್ರದಾನ ಮಾಡಿ ಗೌರವಿಸಿದರು.

ಇವರು ಕನ್ಯಾನ ಗ್ರಾಮದ ಪಂಜಾಜೆ ನಿವಾಸಿಗಳಾದ ಕೃಷಿಕ ಈಶ್ವರ ಭಟ್ ಪಂಜಾಜೆ ಮತ್ತು ವಿಟ್ಲ ಪದವಿ ಪೂರ್ವ ಕಾಲೇಜಿನ ಸಂಸ್ಕೃತ ಉಪನ್ಯಾಸಕಿ ಅರುಣ್ ಭಟ್ ಪಂಜಾಜೆ ಇವರ ಪುತ್ರಿಯಾದ ಅಪೂರ್ವ ಲಕ್ಷ್ಮಿ ಯವರು ಕನ್ಯಾನ ಶ್ರೀ ಸರಸ್ವತಿ ವಿದ್ಯಾಲಯ, ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆ, ಪುತ್ತೂರು ವಿವೇಕಾನಂದ ವಿಧ್ಯಾ ಸಂಸ್ಥೆಯಲ್ಲಿ ಶಿಕ್ಷಣ ಪಡೆದು ಹಾಸನ ಮಹಾವಿದ್ಯಾಲಯದ ಕೃಷಿ ವಿಜ್ಞಾನ ವಿಭಾಗದಲ್ಲಿ ಬಿ.ಎಸ್ಸಿ.ಮಾಡಿದ್ದರು. ನಂತರ ಧಾರವಾಡ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಎಂ.ಎಸ್ಸಿ‌ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!