March 28, 2026

ಪ್ರೀತಿ ನಿರಾಕರಿಸಿದ ವಿದ್ಯಾರ್ಥಿನಿಗೆ ಯುವಕನಿಂದ ಮಾರಣಾಂತಿಕ ಹಲ್ಲೆ

0
image_editor_output_image-1204412431-1654840120373.jpg

ಮಂಡ್ಯ: ಮಂಡ್ಯ ಮೆಡಿಕಲ್ ಕಾಲೇಜ್ ಆವರಣದಲ್ಲಿ ಪ್ರೀತಿ ನಿರಾಕರಿಸಿದ ವಿದ್ಯಾರ್ಥಿನಿ ಮೇಲೆ ಪಾಗಲ್ ಪ್ರೇಮಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಸಂಪತ್ ಕುಮಾರ್ ಎಂಬಾತ ಪ್ಯಾರಾ ಮೆಡಿಕಲ್ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದ. ಆದರೆ ಆಕೆ ಪ್ರೀತಿ ನಿರಾಕರಿಸಿದ್ದರಿಂದ ಕೋಪಗೊಂಡ ಸಂಪತ್ ಕುಮಾರ್ ವಿದ್ಯಾರ್ಥಿನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ಇನ್ನು ಸ್ನೇಹಿತರ ಜೊತೆ ಯುವತಿ ಬರ್ತ್‍ಡೇ ಆಚರಿಸಿಕೊಂಡಿದ್ದ ಸುದ್ದಿ ತಿಳಿದ ಸಂಪತ್ ಮನೆಗೆ ಹೋಗಿ ಗಲಾಟೆ ಮಾಡಿದ್ದು, ಗುರುವಾರ ಬೆಳಗ್ಗೆಯಿಂದಲೂ ಕಾಲೇಜು ಬಳಿಯೇ ಹೊಂಚು ಹಾಕಿದ್ದ ಎಂದು ತಿಳಿದು ಬಂದಿದೆ. ನಂಬರ್ ಪ್ಲೇಟ್ ಇಲ್ಲದ ಸ್ಕೂಟರಿನಲ್ಲಿ ಕಾಲೇಜಿಗೆ ಬಂದ ಸಂಪತ್ ಆವರಣದಲ್ಲೇ ಯುವತಿ ಮೇಲೆ ಹಲ್ಲೆ ನಡೆಸಿದ್ದು, ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

Leave a Reply

Your email address will not be published. Required fields are marked *

error: Content is protected !!