February 4, 2026

ಭಟ್ಕಳ: ಮುರುಡೇಶ್ವರ ಸಮುದ್ರದಲ್ಲಿ ಈಜಲು ತೆರಳಿದ್ದವರಲ್ಲಿ ಇಬ್ಬರು ನೀರು ಪಾಲು, ಮೂವರ ರಕ್ಷಣೆ

0
image_editor_output_image-68396755-1654854633612.jpg

ಭಟ್ಕಳ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುರುಡೇಶ್ವರ ಸಮುದ್ರದಲ್ಲಿ ಈಜಲು ತೆರಳಿದ್ದವರಲ್ಲಿ ಇಬ್ಬರು ನೀರು ಪಾಲಾಗಿದ್ದು, ಮೂವರನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ವರದಿಯಾಗಿದೆ.

ಸುಶಾಂತ್ ಎಂ.ಎಸ್. (23) ಮೃತ ದುರ್ದೈವಿ. ಅಬ್ರಾರ್ ಶೇಖ್ (21) ನೀರಿನಲ್ಲಿ ನಾಪತ್ತೆಯಾದ ಯುವಕ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರದಿಂದ 12 ಯುವಕರ ತಂಡ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಬಂದಿದ್ದು, ಸಮುದ್ರ ಸ್ನಾನಕ್ಕೆಂದು ತೆರಳಿರುವಾಗ ಇದ್ದಕ್ಕಿದ್ದಂತೆ ದೊಡ್ಡ ಅಲೆಯೊಂದು ಬಂದು ಮೂವರನ್ನು ಸೆಳೆದುಕೊಂಡಿದೆ. ಈ ಸಂದರ್ಭದಲ್ಲಿ ಸ್ಥಳೀಯರು ಇಬ್ಬರನ್ನು ರಕ್ಷಣೆ ಮಾಡಿದ್ದು, ಅಬ್ರಾರ್ ಶೇಖ್ ನೀರು ಪಾಲಾಗಿದ್ದಾನೆ.

Leave a Reply

Your email address will not be published. Required fields are marked *

error: Content is protected !!