ದುಬೈ: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಝ್ ಮುಷರಫ್ ಇಂದು ನಿಧನರಾಗಿದ್ದಾರೆ.
ಕೆಲ ಕಾಲದಿಂದ ಅನಾರೋಗ್ಯ ಪೀಡಿತರಾಗಿದ್ದ ಮುಷರಫ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್ ನೆರವಿನಿಂದ ಉಸಿರಾಡುತ್ತಿದ್ದ ಮುಷರಫ್ ಇಂದು ಕೊನೆಯುಸಿರೆಳೆದಿದ್ದಾರೆ. ಪರ್ವೇಜ್ ಮುಷರಫ್ ಅವರು 1999 ರಿಂದ 2008ರ ಅವಧಿಯಲ್ಲಿ ಪಾಕಿಸ್ತಾನದ ಅಧ್ಯಕ್ಷರಾಗಿದ್ದರು.