September 20, 2024

ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸಿ ಮುಸ್ಲಿಂ‌‌ ಸಂಘಟನೆಗಳ ಪ್ರತಿಭಟನೆಗೆ ಅನುಮತಿ ನಿರಾಕರಣೆ

0

ಬೆಂಗಳೂರು: ಪ್ರವಾದಿ ವಿರುದ್ಧ ಹೇಳಿಕೆ ನೀಡಿರುವ ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸಿ ಮುಸ್ಲಿಂ‌‌ ಸಂಘಟನೆಗಳು‌ ಅಲ್ಲಲ್ಲಿ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಖಾಕಿ ಕಣ್ಗಾವಲು ಹೆಚ್ಚಿಸಲಾಗಿದೆ.

ದೇಶದ ಎಲ್ಲ ರಾಜ್ಯಗಳಲ್ಲೂ ಹಿಂಸಾತ್ಮಕ ಪ್ರತಿಭಟನೆ ನಡೆಯಬಹುದು ಎಂದು ಕೇಂದ್ರ ಗೃಹ ಇಲಾಖೆ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಸಿಎಂ‌ ಬಸವರಾಜ್ ಬೊಮ್ಮಾಯಿ‌ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ.

ಗೃಹ ಸಚಿವ ಜ್ಞಾನೇಂದ್ರ, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್, ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್, ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸೇರಿದಂತೆ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗಿಯಾಗಿದ್ದರು.

ವಿಶೇಷವಾಗಿ ಬೆಂಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಬಹುದು ಎಂದು ಬಿಗಿ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಎಸ್ ಡಿಪಿಐ ನೀಡಿದ್ದ ಪ್ರತಿಭಟನೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಇಂದು ಕರೆ ನೀಡಿದ್ದ ಪ್ರತಿಭಟನೆಗೆ ಅನುಮತಿ ಪೊಲೀಸರು ನಿರಾಕರಿಸಿದ್ದಾರೆ. ರಾಜ್ಯದ ಉಳಿದ ಜಿಲ್ಲೆಗಳಲ್ಲೂ ಭದ್ರತೆಗೆ ಧಕ್ಕೆ ಇರುವ ಕಡೆ ಪ್ರತಿಭಟನೆಗೆ ಅನುಮತಿ ಕೊಡದೇ ಇರುವ ಬಗ್ಗೆ ಪೊಲೀಸರು ಚಿಂತನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!