February 2, 2026

ಸುಳ್ಯ: ಎರಡು ಕಾರುಗಳ ಮಧ್ಯೆ ಪರಸ್ಪರ ಡಿಕ್ಕಿ: ಕಾರುಗಳು ಜಖಂ

0
image_editor_output_image1419419358-1654939514368.jpg

ಸುಳ್ಯ: ಎರಡು ಕಾರುಗಳ ಮಧ್ಯೆ ಪರಸ್ಪರ ಡಿಕ್ಕಿ ಹೊಡೆದು ಕಾರುಗಳ ಮುಂಭಾಗ ನಜ್ಜುಗುಜ್ಜಾದ ಘಟನೆ ಸುಳ್ಯದ ಅರಂತೋಡಿನಲ್ಲಿ ನಡೆದಿದೆ.

ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರಿಗೆ ಸಂಪಾಜೆ ಕಡೆಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ವೇಗದ ಚಾಲನೆ ಹಾಗೂ ಅಜಾಗರೂಕತೆಯಿಂದ ಈ ಅಪಘಾತ ನಡೆದಿದೆ ಎನ್ನಲಾಗುತ್ತಿದೆ.

ಪರಿಣಾಮ ಎರಡೂ ಕಾರುಗಳ ಮುಂಭಾಗ ಪುಡಿಪುಡಿಯಾಗಿದ್ದು, ಅದೃಷ್ಟವಶಾತ್ ಕಾರಿನಲ್ಲಿ ಇದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಳ್ಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!