February 2, 2026

ವಿಟ್ಲ: ನೇಣುಬಿಗಿದು ಯುವಕ ಆತ್ಮಹತ್ಯೆ

0
IMG-20220611-WA0001.jpg

ವಿಟ್ಲ: ವ್ಯಕ್ತಿಯೋರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.11 ರಂದು ನಡೆದಿದೆ.

ಮೃತರನ್ನು ವಿಟ್ಲ ಚಂದಳಿಕೆ ಮಾಡತ್ತಡ್ಕ ನಿವಾಸಿ ಜಯಕರ(35) ಎಂದು ಗುರುತಿಸಲಾಗಿದೆ.

ಜಯಕರ ರವರು ಮೇಸ್ತ್ರಿ ಕೆಲಸ ನಿರ್ವಹಿಸುತ್ತಿದ್ದು, ಇಂದು ಮುಂಜಾನೆಯಿಂದ ಕಾಣೆಯಾಗಿದ್ದರು. ಈ ಬಗ್ಗೆ ಅವರ ಮನೆಯವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ ಸಂಜೆ ಅವರ ಮೃತದೇಹ ಮಾಡತ್ತಡ್ಕ ಸಮೀಪ ಗುಡ್ಡದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!