August 12, 2026

ಕೇಂದ್ರದ ಬಳಿಕ ರಾಜ್ಯ ಸರ್ಕಾರದಿಂದ ಪೆಟ್ರೋಲ್ ಮತ್ತು ಡೀಸೆಲ್‌ ಮೇಲಿನ ತೆರಿಗೆಯನ್ನು ಕಡಿತಗೊಳಿಸಲು ತೀರ್ಮಾನ

0
2020-03-25T123213Z_1_LYNXMPEG2O1BG_RTROPTP_3_INDIA-OIL-PRICES_1585279505034_1633659269344.jpeg

ಬೆಂಗಳೂರು: ವಾಹನ ಸವಾರರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೇಂದ್ರ ಸರ್ಕಾರ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂ. ಹಾಗೂ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 5 ರೂ ಕಡಿತಗೊಳಿಸಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರವು ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು 7 ರೂ. ಕಡಿತಗೊಳಿಸಿದೆ. ಇಂದಿನಿಂದಲೇ ಪರಿಷ್ಕೃತ ತೆರಿಗೆ ಅನ್ವಯವಾಗಲಿದೆ.

ಟ್ವೀಟ್ ಮೂಲಕ ಈ ವಿಷಯ ತಿಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗುರುವಾರ ಸಂಜೆಯಿಂದ ಈ ದರ ಜಾರಿಯಾಗಲಿದೆ ಎಂದು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು ಡೀಸಲ್ ಮೇಲೆ 10 ರೂ ಹಾಗೂ ಪೆಟ್ರೋಲ್ 05 ರೂ ಕಡಿಮೆ ಗೊಳಿಸಿದ್ದು ಸ್ವಾಗತಾರ್ಹ ಎಂದ ಅವರು ಜನರಿಗೆ ದೀಪಾವಳಿಯ ಉಡಗೊರೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ, ರಾಜ್ಯ ಸರಕಾರವು ಡೀಸೆಲ್‌ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ದರಿಸಿದೆ.

ಈ ನಮ್ಮ ನಿರ್ದಾರದಿಂದ ರಾಜ್ಯ ಸರಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ಇದು ಕೇಂದ್ರ ಮತ್ತು ರಾಜ್ಯ ಸರಕಾರದಿಂದ ರಾಜ್ಯದ ಜನತೆಗೆ ದೀಪಾವಳಿಯ ಉಡುಗೊರೆ. ಸರ್ವರಿಗೂ ದೀಪಾವಳಿಯ ಹಾರ್ದಿಕ ಶುಭಾಶಯಗಳು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!