July 6, 2026

ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವು, ಎಸ್ಸೈ ಸೇರಿದಂತೆ ಐವರು ಪೊಲೀಸರ ಅಮಾನತು

0
image_editor_output_image-1006075859-1655110664002.jpg

ಚೆನ್ನೈ: ಪೊಲೀಸ್ ವಶದಲ್ಲಿದ್ದ 30 ವರ್ಷದ ಆರೋಪಿಯೊಬ್ಬ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ಐವರನ್ನು ಅಮಾನತುಗೊಳಿಸಲಾಗಿದೆ ಎಂದು ಚೆನ್ನೈನ ಹೆಚ್ಚುವರಿ ಪೊಲೀಸ್ ಕಮಿಷನರ್ ಟಿಎಸ್ ಅನ್ಬು ತಿಳಿಸಿದ್ದಾರೆ.

ಶನಿವಾರ ಕೊಡಂಗಯ್ಯೂರ್ ಪೊಲೀಸರು ರಾಜಶೇಖರ್ ಎಂಬಾತನನ್ನು ವಶಕ್ಕೆ ತೆಗೆದುಕೊಂಡಿದ್ದರು. ಈತನ ವಿರುದ್ಧ 20ಕ್ಕೂ ಅಧಿಕ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ರಾಜಶೇಖರ್ ತಿರುವಳ್ಳೂರ್ ಜಿಲ್ಲೆಯ ನಿವಾಸಿಯಾಗಿದ್ದು, ಈತ ತಾನು ಎಸಗಿರುವ ಅಪರಾಧಗಳ ಬಗ್ಗೆ ತಪ್ಪೊಪ್ಪಿಕೊಂಡಿದ್ದ. ವಿಚಾರಣೆ ವೇಳೆ ಅಸ್ವಸ್ಥಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಕೂಡಲೇ ರಾಜಶೇಖರ್ ನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಯ ನಂತರ ಪೊಲೀಸ್ ಠಾಣೆಗೆ ವಾಪಸ್ ಕರೆ ತರಲಾಗಿತ್ತು. ಆದರೆ ಮತ್ತೆ ರಾಜಶೇಖರ್ ಅಸ್ವಸ್ಥಗೊಂಡಾಗ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಷ್ಟರಲ್ಲಿ ಆತ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದರು ಎಂದು ವರದಿ ವಿವರಿಸಿದೆ.

Leave a Reply

Your email address will not be published. Required fields are marked *

You may have missed

error: Content is protected !!