May 17, 2026

ಚಾಕುವಿನಿಂದ ಇರಿದು ಹೊರರಾಜ್ಯದ ವ್ಯಕ್ತಿಯ ಬರ್ಬರ ಹತ್ಯೆ

0
Screenshot_2022-06-14-17-16-27-90_680d03679600f7af0b4c700c6b270fe7.jpg

ಬೆಂಗಳೂರು: ಚಾಕುವಿನಿಂದ ಇರಿದು ಹೊರರಾಜ್ಯದ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಗರದ ಪುಲಿಕೇಶಿನಗರದ ಎಂಎಂ ರಸ್ತೆಯಲ್ಲಿ ಇಂದು ಮುಂಜಾನೆ ನಡೆದಿದೆ.

ಪಶ್ಚಿಮ ಬಂಗಾಳ ಮೂಲದ ಬಿಕಾಸ್ ಮೂಡಿ(37) ಕೊಲೆಯಾದ ವ್ಯಕ್ತಿ. ಮೂಲತಃ ಪಶ್ಚಿಮ ಬಂಗಾಳದವನಾದ ಬಿಕಾಸ್ ಮೆಟ್ರೋ ಕಾಮಗಾರಿಯಲ್ಲಿ ತೊಡಗಿಸಿಕೊಂಡಿದ್ದನು.

ಆದರೆ ಇಂದು ಬೆಳಗ್ಗೆ ಸುಮಾರು 5 ಗಂಟೆಗೆ ಬಿಕಾಸ್ ಬರ್ಬರವಾಗಿ ಹತ್ಯೆಯಾಗಿದ್ದು, ಪರಿಚಯಸ್ಥರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದೆ.

Leave a Reply

Your email address will not be published. Required fields are marked *

error: Content is protected !!