May 17, 2026

ಕಾಸರಗೋಡು: ನ್ಯಾಯಾಲಯಕ್ಕೆ ಹಾಜರುಪಡಿಸುವ ವೇಳೆ ಪರಾರಿಯಾಗಿದ್ದ ಆರೋಪಿಯ ಬಂಧನ

0
image_editor_output_image-652261016-1655211750615.jpg

ಕಾಸರಗೋಡು: ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆ ತರುತ್ತಿದ್ದಾಗ ಪೊಲೀಸರ ಗಮನ ಬೇರೆಡೆ ಸೆಳೆದು ಪರಾರಿಯಾಗಿದ್ದ ಆರೋಪಿಯನ್ನು ತಿಂಗಳ ಬಳಿಕ ಬೆಂಗಳೂರು ನಿಂದ ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.

ವಿದ್ಯಾನಗರ ಠಾಣಾ ವ್ಯಾಪ್ತಿಯ ಆಲಂಪಾಡಿಯ ಅಮೀರ್ ಅಲಿ ಬಂಧಿತ ಆರೋಪಿ. ಮಾದಕ ವಸ್ತು ಸಾಗಾಟ ಸೇರಿದಂತೆ ಹಲವಾರು ಪ್ರಕರಣಗಳ ಆರೋಪಿಯಾಗಿರುವ ಅಮೀರ್ ಅಲಿಯನ್ನು ಕಾರಿನಲ್ಲಿ ಎಂಡಿ ಎಂಎ ಮಾದಕ ವಸ್ತು ಸಾಗಾಟ ಮಾಡುತ್ತಿದ್ದಾಗ ಮೇ 12ರಂದು ಬದಿಯಡ್ಕದಿಂದ ಬಂಧಿಸಲಾಗಿತ್ತು. ಕಾಸರಗೋಡು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಕಣ್ಣೂರು ಸೆಂಟ್ರಲ್ ಜೈಲ್ ನಲ್ಲಿದ್ದ ಆತನನ್ನು ಮೇ 23ರಂದು ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಕಾಸರಗೋಡು ನ್ಯಾಯಾಲಯಕ್ಕೆ ಕರೆ ತರುತಿದ್ದಾಗ ಕಾಸರಗೋಡು ವಿದ್ಯಾನಗರ ಬಳಿ ಪೊಲೀಸರ ಗಮನ ಬೇರೆಡೆ ಸೆಳೆದು ಈತ ಪರಾರಿಯಾಗಿದ್ದ. ತನಿಖೆ ನಡೆಸಿದ ಪೊಲೀಸರು ಬೆಂಗಳೂರಿನಲ್ಲಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿ ಈತನನ್ನುಬಂಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!