September 20, 2024

ಬಂಟ್ವಾಳ: ಬೈಕ್ ಗೆ ಲಾರಿ ಡಿಕ್ಕಿ ಹೊಡೆದು ಪರಾರಿ:
ಇಬ್ಬರು ಯುವಕರು ಮೃತ್ಯು

0

ಬಂಟ್ವಾಳ: ಲಾರಿ‌ ಡಿಕ್ಕಿ ಹೊಡೆದು ದ್ವಿಚಕ್ರ ಸವಾರಿಬ್ಬರು ಸ್ಥಳದಲ್ಲಿ ಮೃತಪಟ್ಟ ಘಟನೆ ಸಿದ್ದಕಟ್ಟೆ ಸಮೀಪದ ಸೋರ್ನಾಡು ಎಂಬಲ್ಲಿ ಇಂದು ಸಂಜೆ ವೇಳೆ ನಡೆದಿದೆ.

ಮೃತಪಟ್ಟವರನ್ನು ಲೊರೆಟ್ಟೋ ಕಮಲ್ ಕಟ್ಟೆ ನಿವಾಸಿ ಬೈಕ್ ಮ್ಯಾಕನಿಕ್ ನಿತಿನ್ ಹಾಗೂ ಪಿಕಪ್ ಚಾಲಕ ಶಶಿರಾಜ್ ಎಂದು ಗುರುತಿಸಲಾಗಿದೆ.

ಸಿದ್ದಕಟ್ಟೆಯಿಂದ ಬಿಸಿರೋಡು ಕಡೆಗೆ ಬರುತ್ತಿದ್ದ ವೇಳೆ ಬಿ.ಸಿ‌ ರೋಡಿನಿಂದ ಕಾರ್ಕಳಕ್ಕೆ ಅತೀ ವೇಗದಿಂದ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡುತ್ತಿದ್ದ ಟಿಪ್ಪರ್ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ಜಖಂ ಆಗಿದ್ದು, ಬೈಕಿನಲ್ಲಿದ್ದ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಡಿದ್ದಾರೆ.

ಅಜಾಗರೂಕತೆಯಿಂದ ಹಾಗೂ ಅತೀ ವೇಗವಾಗಿ ಚಾಲನೆ ಮಾಡುತ್ತಿದ್ದ ಟಿಪ್ಪರ್ ಲಾರಿ ಚಾಲಕನೇ ಅಪಘಾತಕ್ಕೆ ಕಾರಣವಾಗಿದ್ದು, ಇಬ್ಬರ ಸಾವಿಗೆ ಈತನೇ ನೇರ ಹೊಣೆಯಾಗಿದ್ದಾನೆ ಎಂದು ಸ್ಥಳೀಯರು ಆರೋಪ ವ್ಯಕ್ತಪಡಿಸಿದ್ದಾರೆ.
ಅಪಘಾತ ನಡೆಸಿ ಲಾರಿ ಚಾಲಕ ಲಾರಿ ನಿಲ್ಲಿಸದೆ ಓಡಿ ಹೋಗಲು ಪ್ರಯತ್ನ ಮಾಡಿದ್ದಾನೆ. ಸ್ಥಳೀಯರು ಬೆನ್ನಿಟ್ಟಿ ಸಿದ್ದಕಟ್ಟೆ ಸಮೀಪದ ಕುದ್ಕೋಳಿ ಎಂಬಲ್ಲಿ ಟಿಪ್ಪರ್ ಲಾರಿಗೆ ಅಡ್ಡ ಇಟ್ಟು ಲಾರಿ ನಿಲ್ಲಿಸಿ ಅತನ ವಿರುದ್ಧ ಹರಿಹಾಯಿದ್ದಿದ್ದಾರೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಮೂರ್ತಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!