ಬಂಟ್ವಾಳ: ಗಿಡನಾಟಿ ಮತ್ತು ಪರಿಸರ ಮಾಹಿತಿ ಕಾರ್ಯಕ್ರಮ
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ( ರಿ.) ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಹೊಸಂಗಡಿ ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹೊಕ್ಕಾಡಿಗೋಳಿ ವಿಪತ್ತು ನಿರ್ವಹಣಾ ಘಟಕ ಹೊಸಂಗಡಿ, ಹಳೆ ವಿದ್ಯಾರ್ಥಿ ಸಂಘ ಹೊಕ್ಕಾಡಿಗೋಳಿ, ರೋಟರಿ ಕ್ಲಬ್ ಸಿದ್ಧಕಟ್ಟೆ ಫಲ್ಗುಣಿ, ರೋಟರಿ ಕ್ಲಬ್ ಲೊರೆಟ್ಟೋ ಹಿಲ್ಸ್ ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 12/5/2022ರಂದು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿ ಇಲ್ಲಿ ಗಿಡನಾಟಿ ಮತ್ತು ಪರಿಸರ ಮಾಹಿತಿ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಸತೀಶ್ ಮಠ ಇವರು ವಹಿಸಿದ್ದರು. ಈ ಸಂದರ್ಭದಲ್ಲಿ ಕೃಷಿ ಅಧಿಕಾರಿ ಭಾಸ್ಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಪರಿಸರ ಉಳಿಸಿ ಬೆಳೆಸಲು ಕರೆ ಕೊಟ್ಟರು, ಶಾಲೆಯ ಸಹಶಿಕ್ಷಕರಾದ ರಾಜೇಶ್ ನೆಲ್ಯಾಡಿ ಪರಿಸರ ಇನ್ನು ಮುಂದಿನ ದಿನಗಳಲ್ಲಿ ಎಷ್ಟು ಅವಶ್ಯಕ ಎಂದು ಸಂದರ್ಭೋಚಿತವಾಗಿ ಮಾತನಾಡಿದರು. ರೋಟರಿ ಲೊರೆಟ್ಟೋ ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾದ ರಾಘವೇಂದ್ರ ಭಟ್ ಪರಿಸರ ರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು.
ವೇದಿಕೆಯಲ್ಲಿ ವಲಯದ ಮೇಲ್ವಿಚಾರಕರಾದ ಆಚ್ಯುತ ಸರ್, ವಲಯ ಜನಜಾಗೃತಿ ಸಮಿತಿ ಅಧ್ಯಕ್ಷರಾದ ವಿಠಲ ಸಿ ಪೂಜಾರಿ, ಪಂಚಾಯತ್ ಮಾಜಿ ಅಧ್ಯಕ್ಷರು ಪ್ರಭಾಕರ ಹುಲಿಮೇರು, ಪಂಚಾಯತ್ ಸದಸ್ಯರಾದ ಸುರೇಂದ್ರ ಶೆಟ್ಟಿ, ರೋಟರಿಯ ಅಧ್ಯಕ್ಷರಾದ ಮೈಕಲ್ ಡಿಕೋಸ್ತ, ಹೊಸಂಗಡಿ ವಿಪತ್ತು ನಿರ್ವಹಣಾ ಘಟಕದ ಜಯಶೀಲ, ಗಣೇಶ್, ಸಂಜೀವ, ನೀಲಯ್ಯ, ಗುರುಪ್ರಸಾದ್, ಉದಯ್ ಕುಮಾರ್ ಹೊಸಂಗಡಿ ಒಕ್ಕೂಟದ ಅಧ್ಯಕ್ಷರಾದ ಶೇಖರ ಪೂಜಾರಿ, ಸೇವಾಪ್ರತಿನಿಧಿ ಶ್ರೀಮತಿ ಮಮತಾ, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ರೋಟರಿ ಕ್ಲಬ್ ನ ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಲಯದ ಮೇಲ್ವಿಚಾರಕರಾದ ಅಚ್ಯುತ ಸರ್ ನಿರೂಪಿಸಿದ ಕಾರ್ಯಕ್ರಮದಲ್ಲಿ, ಜಯಶೀಲ ಸ್ವಾಗತಿಸಿ ಸೇವಾಪ್ರತಿನಿಧಿ ಮಮತಾ ವಂದಿಸಿದರು.




