ಕೆಎಸ್‌ಆರ್‌ಟಿಸಿ ಬಸ್, ಲಾರಿಗೆ ಢಿಕ್ಕಿ: 11 ಮಂದಿ ಗಾಯ
ಹೊಸಪೇಟೆ: ಕೆಎಸ್‌ಆರ್‌ಟಿಸಿ ಬಸ್, ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ 11 ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಬುಧವಾರ ನಸುಕಿನ ವೇಳೆ ನಡೆದಿದೆ.
ಬೆಂಗಳೂರಿನಿಂದ ಬರುತ್ತಿದ್ದ ಬಸ್, ಮುಂದೆ ಚಲಿಸುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ 11 ಜನರು ಗಾಯಗೊಂಡಿದ್ದಾರೆ. ಇವರಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರು ಮತ್ತು ಹೈವೆ ಪೆಟ್ರೋಲಿಂಗ್ ಸಿಬ್ಬಂದಿಯ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾನಾಹೊಸಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ




