ಲಾರಿ, ಸಾರಿಗೆ ಸಂಸ್ಥೆಯ ಬಸ್ ನಡುವೆ ಮುಖಾಮುಖಿ ಢಿಕ್ಕಿ: 25 ಜನರು ಗಾಯ
ವಿಜಯನಗರ: ತಾಲ್ಲೂಕಿನ ಕೊಟಗಿನಹಾಳು ಗ್ರಾಮದ ಬಳಿ ಹೊಸಪೇಟೆ-ಬಳ್ಳಾರಿ ಹೆದ್ದಾರಿಯಲ್ಲಿ ಲಾರಿ-ಸಾರಿಗೆ ಸಂಸ್ಥೆಯ ಬಸ್ ನಡುವೆ ಗುರುವಾರ ಬೆಳಿಗ್ಗೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ 25 ಜನ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ




