February 3, 2026

ಚಾರ್ಮಾಡಿ ಘಾಟ್ ನಲ್ಲಿ ಮಿನಿ ಗೂಡ್ಸ್ ವಾಹನ ಪಲ್ಟಿ: ಮೂವರು ಗಂಭೀರ

0
image_editor_output_image1210620227-1655357871788.jpg

ಮೂಡಿಗೆರೆ: ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಮಿನಿ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಗುರುವಾರ (ಜೂ.16) ಮುಂಜಾನೆ ನಡೆದಿದೆ.

ಕೊಟ್ಟಿಗೆಹಾರದಿಂದ ಕೆಲಸಕ್ಕೆಂದು ಕರೆದುಕೊಂಡು ಹೋಗುತ್ತಿರುವ ವೇಳೆ ಅವಘಡ ಸಂಭವಿಸಿದ್ದು, ಈ ವೇಳೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಪ್ರಥಮ ಚಿಕಿತ್ಸೆ ಕೊಡಿಸಿ, ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.  ಗಾಯಾಳುಗಳು ಉತ್ತರ ಪ್ರದೇಶದವರೆಂದು ತಿಳಿದು ಬಂದಿದೆ.

ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Leave a Reply

Your email address will not be published. Required fields are marked *

error: Content is protected !!