December 16, 2025

3 ಸಾವಿರ ಕೋಟಿ ರೂ. ದಾಟಿದ ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ದೇಣಿಗೆ

0
image_editor_output_image-54331413-1636003743471.jpg

ಲಖನೌ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಭಾರೀ ಪ್ರಮಾಣದಲ್ಲಿ ದೇಣಿಗೆ ಹರಿದು ಬರುತ್ತಿದ್ದು, ಈಗ 3 ಸಾವಿರ ಕೋಟಿಗೂ ಹೆಚ್ಚು ಹಣ ಸಂಗ್ರಹವಾಗಿದೆ.

ದೇಣಿಗೆ ಸಂಗ್ರಹಿಸುತ್ತಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಟ್ರಸ್ಟ್ ಕಾರ್ಪೊರೇಟ್ ದೈತ್ಯ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್(ಟಿಸಿಎಸ್) ಗೆ ತನ್ನ ಹಣದ ನಿರ್ವಹಣೆಯನ್ನು ವಹಿಸಿಕೊಟ್ಟಿದೆ. ಟಿಸಿಎಸ್ ದೇಣಿಗೆ ನಿರ್ವಹಣೆಗಾಗಿ ಲೆಕ್ಕಪತ್ರ ಸಾಫ್ಟ್‌ವೇರ್ ಅನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಟ್ರಸ್ಟ್‌ನ ಭೂ ವ್ಯವಹಾರಗಳ ವಿವಾದಗಳ ಹಿನ್ನೆಲೆಯಲ್ಲಿ ದೇಣಿಗೆ ನಿರ್ವಹಣೆಯ ಹಸ್ತಾಂತರವನ್ನು ಪ್ರಾರಂಭಿಸಲಾಗಿದೆ ಎಂದು ದೇವಸ್ಥಾನದ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರು ಖಚಿತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!