ಬೀಚ್‌ನಲ್ಲಿ ಅಜಾಗರೂಕತೆಯಿಂದ ಕಾರು ಚಲಾಯಿಸಿ ಪೇಚಿಗೆ ಸಿಲುಕಿದ ಪ್ರವಾಸಿಗ
ಪಣಜಿ: ಗೋವಾ ಬೀಚ್‌ನಲ್ಲಿ ಪ್ರವಾಸಿಗನೊಬ್ಬ ಅಜಾಗರೂಕತೆಯಿಂದ ಕಾರನ್ನು ಚಲಾಯಿಸಿ, ಪೇಚಿಗೆ ಸಿಲುಕಿದ ಘಟನೆ ಶುಕ್ರವಾರ ನಡೆದಿದೆ.
ದೆಹಲಿ ಮೂಲದ ಲಲಿತ್‍ಕುಮಾರ್ ದಯಾಳ್ ಎಂಬಾತ ಬಾಡಿಗೆಗೆ ಕಾರನ್ನು ಪಡೆದು ಕಡಲ ತೀರದಲ್ಲಿ ಚಲಾಯಿಸಿದ್ದಾನೆ. ಈ ವೇಳೆ ಕಾರು ನೀರಿನಲ್ಲಿ ಮುಳುಗಿದೆ.
ಘಟನೆ ಹಣಜುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.




