August 22, 2026

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

0
Screenshot_2022-06-18-02-11-53-49_680d03679600f7af0b4c700c6b270fe7.jpg

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಜೂನ್ 18ರಂದು ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದರು.

ಕಳೆದ ಎಪ್ರಿಲ್ 23 ರಿಂದ ಮೇ 18ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಾಗಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. ಈ ಪೈಕಿ 3,46,936 ಬಾಲಕರು ಹಾಗೂ 3,37,319 ಬಾಲಕಿಯರು ದಾಖಲಾಗಿದ್ದರು. ರಾಜ್ಯಾದ್ಯಂತ ಒಟ್ಟು 1,076 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಕಲಾ ವಿಭಾಗಕ್ಕೆ 2,28,167 ಮಂದಿ, ವಾಣಿಜ್ಯ ವಿಭಾಗಕ್ಕೆ 2,45,519 ಮಂದಿ ಮತ್ತು ವಿಜ್ಞಾನ ವಿಭಾಗದಲ್ಲಿ 2,10,569 ಮಂದಿ ಪರೀಕ್ಷೆಗೆ ಕುಳಿತಿದ್ದರು.

kseeb.kar.nic.in, pue.kar.nic.in ಅಥವಾ karresults.nic.in ವೆಬ್‌ ಸೈಟ್‌ ಗಳಿಗೆ ಭೇಟಿ ನೀಡಿ ಫಲಿತಾಂಶವನ್ನು ಪಡೆಯಬಹುದಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!