July 6, 2026

ಡಿಸೆಂಬರ್‌ ಅಂತ್ಯದೊಳಗೆ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಗೋಶಾಲೆ ಪ್ರಾರಂಭ

0
Screenshot_2022-06-18-10-57-47-92_680d03679600f7af0b4c700c6b270fe7.jpg

ಬೆಂಗಳೂರು: ರಾಜ್ಯದ ಪ್ರತೀ ಜಿಲ್ಲೆಯಲ್ಲಿ ಡಿಸೆಂಬರ್‌ ಅಂತ್ಯದೊಳಗೆ ಗೋಶಾಲೆಗಳನ್ನು ಪ್ರಾರಂಭ ಮಾಡಲಾಗುವುದೆಂದು ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿರುವ ರಾಜ್ಯ ಸರಕಾರ, ಯಾವ ತಿಂಗ ಳಲ್ಲಿ, ಯಾವ ಜಿಲ್ಲೆಯಲ್ಲಿ ಗೋಶಾಲೆ ಕಾರ್ಯಾರಂಭ ಮಾಡಲಿವೆ ಎನ್ನುವ ಬಗ್ಗೆ ಪಟ್ಟಿಯನ್ನೂ ಸಲ್ಲಿಸಿದೆ.

ಸರಕಾರ ಮಾಡಿಕೊಂಡಿರುವ ಪಟ್ಟಿ ಯಂತೆ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಕಲಬುರಗಿ, ಬೆಳಗಾವಿ ಜಿಲ್ಲೆಗಳಲ್ಲಿ ಡಿಸೆಂಬರ್‌ ಅಂತ್ಯದೊಳಗೆ ಗೋಶಾಲೆಗಳು ಕಾರ್ಯಾರಂಭ ಮಾಡಲಿವೆ.

ಚಿಕ್ಕಮಗಳೂರು, ವಿಜಯ ಪುರ, ಮೈಸೂರು, ಹಾಸನ ಹಾಗೂ ತುಮಕೂರು ಜಿಲ್ಲೆಗಳಲ್ಲಿ 2022ರ ಜುಲೈ 15ರೊಳಗೆ ಗೋಶಾಲೆಗಳು ಕಾರ್ಯಾರಂಭ ಮಾಡ ಲಿವೆ. ಬೀದರ್‌, ಕೊಪ್ಪಳ, ಚಿತ್ರದುರ್ಗ, ಹಾವೇರಿ, ಉತ್ತರ ಕನ್ನಡ, ದಾವಣಗೆರೆ, ಕೊಡಗು, ಚಾಮರಾಜ ನಗರ, ಕೋಲಾರ ಹಾಗೂ ಬೆಂಗ ಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಆಗಸ್ಟ್‌ 1ರೊಳಗೆ ಗೋಶಾಲೆಗಳು ಕಾರ್ಯಾ ರಂಭ ಮಾಡಲಿವೆ.

ರಾಯ ಚೂರು, ಧಾರವಾಡ, ಮಂಡ್ಯ, ಯಾದಗಿರಿ, ರಾಮನಗರ ಜಿಲ್ಲೆಗಳಲ್ಲಿ ಸೆಪ್ಟಂಬರ್‌ 1ರೊಳಗೆ, ಗದಗ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಅಕ್ಟೋಬರ್‌ 1ರೊಳಗೆ ಹೀಗೆ ವರ್ಷದ ಅಂತ್ಯದೊಳಗೆ ಎಲ್ಲ 30 ಗೋಶಾಲೆಗಳ ಸ್ಥಾಪನೆ ಪ್ರಕ್ರಿಯೆ ಮುಗಿಯಲಿದೆ ಎಂದು ಸರಕಾರ ಹೇಳಿದೆ.

Leave a Reply

Your email address will not be published. Required fields are marked *

You may have missed

error: Content is protected !!