ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ:
ದ.ಕ ಜಿಲ್ಲೆ ಪ್ರಥಮ, ಚಿತ್ರದುರ್ಗ ಜಿಲ್ಲೆಗೆ ಕೊನೆಯ ಸ್ಥಾನ
ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಶೇ. 61.88 ಉತ್ತೀರ್ಣರಾಗಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಫಲಿತಾಂಶಗಳ ವಿವರವನ್ನು ನೀಡಿದರು.
ಗ್ರಾಮೀಣ ಬಾಗದ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದಾರೆ. 4,22,966 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಫಲಿತಾಂಶದಲ್ಲಿ ದ.ಕ ಜಿಲ್ಲೆ ಪ್ರಥಮ ಹಾಗೂ ಚಿತ್ರದುರ್ಗ ಜಿಲ್ಲೆಗೆ ಕೊನೆಯ ಸ್ಥಾನ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.
ಫಲಿತಾಂಶವನ್ನು http://karresults.nic.In ವೆಬ್‍ಸೈಟ್‍ನಲ್ಲಿ ವೀಕ್ಷಿಸಬಹುದು.




